ಪ್ರವಾದಿ ನಿಂದನೆ : ಮಧುಗಿರಿ ಮೋದಿ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Update: 2020-02-19 07:45 GMT

ಶಿವಮೊಗ್ಗ :  ಪ್ರವಾದಿ ಮೊಹಮ್ಮದ್‌ (ಸ) ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿರುವ ಮಧುಗಿರಿ ಮೋದಿ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಸುನ್ನಿ ಜಮೀಯತುಲ್ ಉಲಮಾ ಕಮಿಟಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಮಧುಗುರಿ ಮೋದಿ ಸೋಷಿಯಲ್ ಮೀಡಿಯಾದಲ್ಲಿ ಪ್ರವಾದಿ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದರಿಂದ ನಮಗೆ  ನೋವುಂಟಾಗಿದೆ. ಕೂಡಲೇ ಇವರನ್ನು ಬಂಧಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆ ನಂತರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕಮಿಟಿ ಅಧ್ಯಕ್ಷ ಅಬ್ದುಲ್ ಸತ್ತಾರ್, ಸತ್ತಾರ್ ಬೇಗ್, ಇಜಾಝ್ ಪಾಷ, ಸೈಯದ್ ಲಿಯಾಖತ್ ಮತ್ತಿತರರು ಇದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News