ಮೈಸೂರು ವಿಭಾಗ ಮಟ್ಟದ ಯುವಜನಮೇಳ

Update: 2020-02-19 15:13 GMT

ಉಡುಪಿ, ಫೆ.19:  ಮೈಸೂರು ವಿಭಾಗ ಮಟ್ಟದ ಯುವಜನ ಮೇಳವನ್ನು ಫೆ.29ರಿಂದ ಮಾರ್ಚ್ 2ರವರೆಗೆ ಮಂಡ್ಯ ಜಿಲ್ಲೆಯ ಇಂಡುವಾಳು ಗ್ರಾಮದಲ್ಲಿ ಸಂಘಟಿಸಲು ನಿರ್ಧರಿಸಲಾಗಿದೆ.

2018-19ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಯುವಜನಮೇಳದಲ್ಲಿ ವೈಯುಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದವರು ವಿಭಾಗ ಮಟ್ಟದಲ್ಲಿ ಭಾಗವಹಿ ಸಲು ಅರ್ಹರಾಗಿರುತ್ತಾರೆ. ಭಾಗವಹಿಸುವ ಸ್ಪರ್ಧಿಗಳು ಫೆ.29ರ ಅಪರಾಹ್ನ 1:00 ಗಂಟೆಯೊಳಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಡಾ. ರೋಶನ್‌ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ (0820-2521324) ಇವರನ್ನು ಸಂಪರ್ಕಿುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News