'ಪಾಕಿಸ್ತಾನ್ ಝಿಂದಾಬಾದ್' ಘೋಷಣೆ ಕೂಗಿದ ಅಮೂಲ್ಯರನ್ನು ಹೊರದಬ್ಬಿದ ಸಿಎಎ ವಿರೋಧಿ ಪ್ರತಿಭಟನಕಾರರು
Update: 2020-02-20 19:05 IST
ಬೆಂಗಳೂರು: ಇಲ್ಲಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ 'ಪಾಕಿಸ್ತಾನ್ ಝಿಂದಾಬಾದ್' ಘೋಷಣೆ ಕೂಗಿದ ಅಮೂಲ್ಯರನ್ನು ಪ್ರತಿಭಟನಕಾರರು ಮತ್ತು ಸಂಘಟಕರು ಕಾರ್ಯಕ್ರಮದಿಂದ ಹೊರದಬ್ಬಿದ ಘಟನೆ ನಡೆದಿದೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಲು ಆರಂಭಿಸಿದ ಅಮೂಲ್ಯ 'ಪಾಕಿಸ್ತಾನ್ ಝಿಂದಾಬಾದ್' ಘೋಷಣೆ ಕೂಗಿದರು. ಕೂಡಲೇ ಧಾವಿಸಿ ಬಂದ ಅಸದುದ್ದೀನ್ ಒವೈಸಿಯವರು ಅಮೂಲ್ಯ ಕೈಯಲ್ಲಿದ್ದ ಮೈಕ್ ಕಿತ್ತುಕೊಂಡರು. ನಂತರ ಆಕೆಯನ್ನು ಪ್ರತಿಭಟನಕಾರರು ಮತ್ತು ಸಂಘಟಕರು ಕಾರ್ಯಕ್ರಮದಿಂದ ಹೊರದಬ್ಬಿದ್ದಾರೆ ಎಂದು ವರದಿಯಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.