ಫೆ.22: ಶಕ್ತಿ ಶಾಲೆಯಲ್ಲಿ ‘ಹೊಸ ಶಿಕ್ಷಣ ನೀತಿ’ ವಿಚಾರ ಸಂಕಿರಣ

Update: 2020-02-20 17:14 GMT

ಮಂಗಳೂರು, ಫೆ.20: ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಹೊಸ ಶಿಕ್ಷಣ ನೀತಿಯ ಕುರಿತು ಫೆ.22ರಂದು ಪೂರ್ವಾಹ್ನ 9:30ಕ್ಕೆ ವಿಚಾರ ಸಂಕಿರಣ ನಡೆಯಲಿದೆ.

ಶಿಕ್ಷಣ ತಜ್ಞ ಉಡುಪಿಯ ಡಾ.ಟಿ.ಎಂ.ಎ. ಪೈ ಶಿಕ್ಷಣ ಮಹಾವಿದ್ಯಾಲಯದ ಸಂಯೋಜಕ ಡಾ.ಮಹಾಬಲೇಶ್ವರ ರಾವ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪ್ರಶಾಂತ್‌ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೋಕ್ತೇಸರ ಕೆ.ಸಿ. ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶಾಲಾ ಪ್ರಾಚಾರ್ಯೆ ವಿದ್ಯಾ ಕಾಮತ್ ಜಿ. ತಿಳಿಸಿದ್ದಾರೆ.

ಕಾರ್ಯಕ್ರಮವದ ಸದುಪಯೋಗವನ್ನು ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಗಳ ಶಿಕ್ಷಕರು ಹಾಗೂ ಆಡಳಿತ ಮಂಡಳಿಯ ಸದ್ಯಸರು ಪಡೆಯಬಹುದು. ಅಲ್ಲದೆ, ಅದೇ ದಿನ ಬೆಳಗ್ಗೆ 9 ಗಂಟೆಗೆ ಆಗಮಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂಸ್ಥೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News