ಅಮೂಲ್ಯಗೆ ನಕ್ಸಲರ ಜತೆ ಸಂಬಂಧವಿತ್ತು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Update: 2020-02-21 09:06 GMT

ಮೈಸೂರು : ಬೆಂಗಳೂರಿನಲ್ಲಿ ನಡೆದ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಯುವತಿಗೆ ನಕ್ಸಲರ ಜತೆ ಸಂಬಂಧವಿರುವುದು ಈ ಹಿಂದೆ ಸಾಬೀತಾಗಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ತಪ್ಪು ಮಾಡಿದವರಿಗೆ ಸೂಕ್ತ ಶಿಕ್ಷೆಯಾಗಬೇಕು. ಇದರ ಹಿಂದೆಯಿರುವ ಸಂಘಟನೆಗಳ ಮೇಲೆ ಕ್ರಮ ಜರಗಿಸಲಾಗುವುದು ಎಂದರು.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡುವಂತಹ ವ್ಯವಸ್ಥಿತ ಸಂಚು ಇದರ ಹಿಂದೆ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದ ಅವರು ‘ಅವಳ ಕೈಕಾಲು ಮುರಿಯಿರಿ, ಜಾಮೀನು ಸಿಗಬಾರದು. ನಾನು ಅವಳ ರಕ್ಷಣೆಗೆ ಹೋಗಲ್ಲ’ ಎಂದು ಅವಳ ತಂದೆಯವರೇ ಹೇಳಿದ್ದಾರೆ ಎಂದು ಸಿಎಂ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News