ವನಿತೆಯರ ಟ್ವೆಂಟಿ-20 ವಿಶ್ವಕಪ್: ಭಾರತ ಶುಭಾರಂಭ

Update: 2020-02-21 12:05 GMT

ಸಿಡ್ನಿ, ಫೆ.21: ಸ್ಪಿನ್ನರ್ ಪೂನಂ ಯಾದವ್ ಸ್ಪಿನ್ ಮೋಡಿಯ ನೆರವಿನಿಂದ ಭಾರತ ತಂಡ ಶುಕ್ರವಾರ ಇಲ್ಲಿ ಆರಂಭವಾದ ವನಿತೆಯರ ಟ್ವೆಂಟಿ-20 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯ ತಂಡವನ್ನು 17 ರನ್‌ಗಳಿಂದ ಸೋಲಿಸುವುದರೊಂದಿಗೆ ಶುಭಾರಂಭ ಮಾಡಿದೆ.

 ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು. ಶೆಫಾಲಿ ವರ್ಮಾ 15 ಎಸೆತಗಳಲ್ಲಿ 29 ಹಾಗೂ ದೀಪ್ತಿ ಶರ್ಮಾ 46 ಎಸೆತಗಳಲ್ಲಿ ಔಟಾಗದೆ 49 ರನ್ ಗಳಿಸಿದರು.

ಗೆಲ್ಲಲು 133 ರನ್ ಬೆನ್ನಟ್ಟಿದ ಆಸ್ಟ್ರೇಲಿಯ 19.5 ಓವರ್‌ಗಳಲ್ಲಿ 115 ರನ್ ಗಳಿಸಿ ಆಲೌಟಾಗಿದೆ. ಆರಂಭಿಕ ಆಟಗಾರ್ತಿ ಅಲಿಸ್ಸಾ ಹೀಲಿ 35 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್‌ಗಳ ಸಹಿತ 51 ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು. ಪೂನಂ ನೇತೃತ್ವದ ಭಾರತದ ಸ್ಪಿನ್ನರ್‌ಗಳು ಆಸ್ಟ್ರೇಲಿಯ 82 ರನ್‌ಗೆ ಆರು ವಿಕೆಟ್ ಕಳೆದುಕೊಳ್ಳಲು ಕಾರಣರಾದರು.

ಪೂನಂ(4-19)12ನೇ ಓವರ್‌ನಲ್ಲಿ ಸತತ ಎರಡು ಎಸೆತಗಳಲ್ಲಿ 2 ವಿಕೆಟ್ ಪಡೆದು ಆಸ್ಟ್ರೇಲಿಯದ ಬೆನ್ನುಮೂಳೆ ಮುರಿದರು. ಅಶ್ಲೆಘ್ ಗಾರ್ಡ್ನರ್(34,36 ಎಸೆತ)ತಂಡವನ್ನು ಆಧರಿಸಲು ಯತ್ನಿಸಿದರಾದರೂ, ಮತ್ತೊಂದೆಡೆ ಅವರಿಗೆ ಸರಿಯಾದ ಬೆಂಬಲ ಸಿಗಲಿಲ್ಲ. ಭಾರತ ಫೆ.24ರಂದು ಪರ್ತ್‌ನಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News