ಮುಕ್ತ ವಿವಿಯಿಂದ ಕೆಎಎಸ್, ಎಫ್‌ಡಿಎ ಪರೀಕ್ಷೆಗಳಿಗೆ ತರಬೇತಿ
Update: 2020-02-21 19:44 IST
ಉಡುಪಿ, ಫೆ.21: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರಕಾರ ಮೇ ತಿಂಗಳಲ್ಲಿ ನಡೆಸಲಿರುವ ಕೆಎಎಸ್ ಮತ್ತು ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಆಸಕ್ತರು ಫೆ.29ರೊಳಗೆ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 4 ಗಂಟೆಯೊಳಗೆ ತಮ್ಮ ಹೆರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ: 0821-2515944 ನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.