ನಂದಿನಿ ಪಾರ್ಲರ್ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

Update: 2020-02-21 14:15 GMT

ಉಡುಪಿ, ಫೆ.21: ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳ ಸಹಯೋಗದೊಂದಿಗೆ ನಿರುದ್ಯೋಗಿ ಪರಿಶಿಷ್ಟ ಜಾತಿ/ ಪ.ಪಂಗಡದ ಯುವಕ/ಯುವತಿಯರಿಗೆ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಅಭಿವೃದ್ಧಿ ಪಡಿಸಲು ಗ್ರಾಮೀಣ ಬಾಗದಲ್ಲಿ ಗ್ರಾಮ ಪಂಚಾಯತ್ ಅಂಗಡಿ ಕೋಣೆಗಳಲ್ಲಿ/ ಖಾಲಿ ಸ್ಥಳಗಳಲ್ಲಿ ಲೀಸ್/ ಬಾಡಿಗೆ ಆಧಾರದಲ್ಲಿ ನಂದಿನಿ ಪಾರ್ಲರ್‌ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

ಆಸಕ್ತ ಅ್ಯರ್ಥಿಗಳು ಮಾ.5ರೊಳಗೆ ಅರ್ಜಿಯನ್ನು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ, ಜಿಲ್ಲಾ ಕಛೇರಿಗಳ ಸಂಕೀರ್ಣ, ಬಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ 302, ರಜತಾದ್ರಿ ಮಣಿಪಾಲ ಇವರಿಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0820-2574884ನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News