ಅಂಗನವಾಡಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Update: 2020-02-21 14:16 GMT

ಉಡುಪಿ, ಫೆ.21: ಉಡುಪಿ ತಾಲೂಕಿನ ಶಿಶು ಆಭಿವೃದ್ಧಿ ಯೋಜನಾ ಗ್ರಾಪಂ ವ್ಯಾಪ್ತಿಯ ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಉಡುಪಿ ಶಿಶು ಆಭಿವೃಧ್ದಿ ಯೋಜನಾಧಿಕಾರಿ ಕಚೇರಿಯ ನೋಟಿಸು ಬೋರ್ಡಿನಲ್ಲಿ ಪ್ರಕಟಿಸಲಾಗಿದೆ.

ಈ ಬಗ್ಗೆ ಯಾರಿಗಾದರೂ ಆಕ್ಷೇಪಣೆಗಳಿದ್ದಲ್ಲಿ ಮಾ.2ರ ಸಂಜೆ 5:30ರ ಒಳಗೆ ಶಿಶು ಆಭಿವೃಧ್ದಿ ಯೋಜನಾಧಿಕಾರಿ ಉಡುಪಿ ಇವರಿಗೆ ಖುದ್ದಾಗಿ ಅಥವಾ ಅವರ ಕಚೇರಿಗೆ ಸಲ್ಲಿಸುವಂತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಬ್ರಹ್ಮಾವರ/ಕುಂದಾಪುರ/ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಗ್ರಾಪಂ/ಪುರಸಭೆ ಮತ್ತು ನಗರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿತ ಶಿಶು ಆಭಿವೃಧ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಫೆ.24ರಂದು ಕಚೇರಿಯ ನೋಟಿಸ್ ಬೋರ್ಡಿನಲ್ಲಿ ಹಾಕಲಾಗುವುದು.

ಈ ಬಗ್ಗೆ ಯಾರಿಗಾದರೂ ಆಕ್ಷೇಪಣೆ ಇದ್ದಲ್ಲಿ ಮಾ.2ರ ಸಂಜೆ 5:30ರ ಒಳಗೆ ಸಂಬಂಧಿತ ಶಿಶು ಆಭಿವೃಧ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಖುದ್ದಾಗಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News