ವಿಟ್ಲ: ಕಂಟೈನರ್ ಢಿಕ್ಕಿಯಿಂದ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜು; ಇಬ್ಬರು ಪವಾಡಸದೃಶ್ಯ ರೀತಿಯಲ್ಲಿ ಪಾರು

Update: 2020-02-21 17:02 GMT

ವಿಟ್ಲ, ಫೆ.21: ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾವೊಂದು ಸಂಪೂರ್ಣ ನಜ್ಜುಗುಜ್ಜಾಗಿದ್ದು ರಿಕ್ಷಾ ಚಾಲಕ ಸಹಿತ ಇಬ್ಬರು ಪವಾಡಸದೃಶ್ಯ ರೀತಿಯಲ್ಲಿ ಪಾರಾದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಗಡಿಯಾರದಿಂದ ಪೇರಮೊಗೇರು ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಗೆ ಕಂಟೈನರ್ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಈ ಅವಘಡದ ಸಂದರ್ಭ ರಿಕ್ಷಾದಲ್ಲಿ ಚಾಲಕ ಸಹಿತ ಇಬ್ಬರು ಇದ್ದು ಇಬ್ಬರೂ ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಅಪಘಾತದ ಬಳಿಕ ಲಾರಿ ಚಾಲಕ ಲಾರಿಯೊಂದಿಗೆ ಪರಾರಿಯಾಗಲು ಯತ್ನಿಸಿದ್ದು ಸಾರ್ವಜನಿಕರು ಲಾರಿಯನ್ನು ಪತ್ತೆ ಹಚ್ಚಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News