ಶಶಿ ತರೂರ್ ವಿದೇಶ ಪ್ರವಾಸಕ್ಕೆ ಅನುಮತಿ

Update: 2020-02-22 12:55 GMT

ಹೊಸದಿಲ್ಲಿ, ಫೆ.22: ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಶಶಿ ತರೂರ್‌ಗೆ ವಿದೇಶಕ್ಕೆ ತೆರಳಲು ರೌಸ್ ಅವೆನ್ಯೂ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ. ಫೆಬ್ರವರಿಯಿಂದ ಮೇ ತಿಂಗಳಿನ ನಡುವೆ ಯುಎಇ, ಫ್ರಾನ್ಸ್ ಮತ್ತು ನಾರ್ವೆಗೆ ಭೇಟಿ ನೀಡಲು ಅನುಮತಿ ನೀಡುವಂತೆ ಕೋರಿ ತರೂರ್ ಮಂಗಳವಾರ ದಿಲ್ಲಿಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಜಯ್ ಕುಮಾರ್ ಅನುಮತಿ ಮಂಜೂರುಗೊಳಿಸಿದರು. ಈ ಹಿಂದೆಯೂ ತರೂರ್ ವಿದೇಶ ಪ್ರಯಾಣಕ್ಕೆ ನ್ಯಾಯಾಲಯ ಅನುಮತಿ ನೀಡಿತ್ತು. ಪತ್ನಿ ಸುನಂದಾ ಪುಷ್ಕರ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ತರೂರ್ ಈಗ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ದೇಶ ಬಿಟ್ಟು ತೆರಳಬಾರದು ಎಂಬ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News