‘ಸಪ್ತಪದಿ’ ಸಾಮೂಹಿಕ ವಿವಾಹ ಕುರಿತು ಫೆ.23ರಂದು ವಿಚಾರಸಂಕಿರಣ

Update: 2020-02-22 15:39 GMT

ಉಡುಪಿ, ಫೆ.22: ಜಿಲ್ಲಾಡಳಿತ ಹಾಗೂ ಉಡುಪಿ ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಗಳ ವತಿಯಿಂದ ‘ಸಪ್ತಪದಿ’ ಸರಳ ಸಾಮೂಹಿಕ ವಿವಾಹ ಕುರಿತು ವಿಚಾರಸಂಕಿರಣವೊಂದು ಫೆ.23ರ  ಅಪರಾಹ್ನ 3 ಗಂಟೆಗೆ ನಗರದ ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಮುಜರಾಯಿ ಮತ್ತು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್‌ನ ಸದಸ್ಯ ಮಹರ್ಷಿ ಆನಂದ ಗುರೂಜಿ, ಸಪ್ತಪದಿ ಸರಳ ಸಾಮಾಹಿಕ ವಿವಾಹ ಕುರಿತು ಉಪನ್ಯಾಸ ನೀಡಲಿದ್ದಾರೆ. ಎಲ್ಲಾ ಜನಪ್ರತಿನಿಧಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.

ಈ ವಿಚಾರ ಸಂಕಿರಣಕ್ಕೆ ಜಿಲ್ಲೆಯ ಎಲ್ಲಾ ದೇವಾಲಯಗಳ ವ್ಯವಸ್ಥಾಪನಾ ಸಮಿತಿಯ ಮುಖ್ಯಸ್ಥರು, ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತ ಎಂ. ರವಿಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News