ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಎಸ್‌ಡಿಪಿಐ ಧರಣಿ

Update: 2020-02-22 15:44 GMT

ಉಡುಪಿ, ಫೆ. 22: ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಶನಿವಾರ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಸಮಿತಿಯ ಸದಸ್ಯ ಇಲಿಯಾಸ್ ಸಾಸ್ತಾನ ಮಾತನಾಡಿ, ಕೇಂದ್ರ ಬಿಜೆಪಿ ಸರಕಾರ ಎಲ್‌ಐಸಿ, ರೈಲ್ವೆ ಸೇರಿದಂತೆ ಎಲ್ಲವನ್ನು ಖಾಸಗೀಕರಣ ಮಾಡುವ ಮೂಲಕ ಇಡೀ ದೇಶವನ್ನು ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿದೆ. ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಮೂಲಕ ಜನರಿಂದ ಕೋಟ್ಯಂತರ ಹಣ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ಮಜೀದ್ ಉಚ್ಚಿಲ, ಪಿಎಫ್‌ಐ ಉಡುಪಿ ವಿಭಾಗೀಯ ಅಧ್ಯಕ್ಷ ಬಶೀರ್ ಉಡುಪಿ, ಮುಖಂಡರಾದ ಫೈಝಲ್ ಉಡುಪಿ, ಶುಕೂರ್ ಮಲ್ಪೆ ಮೊದಲಾದವರು ಉಪಸ್ಥಿತರಿದ್ದರು. ಸಲೀಂ ನಿಟ್ಟೂರು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News