ಪದವೀಧರ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಸಚಿವರೊಂದಿಗೆ ಮಾತುಕತೆ: ಕೋಟ ಶ್ರೀನಿವಾಸ ಪೂಜಾರಿ

Update: 2020-02-22 15:46 GMT

ಉಡುಪಿ, ಫೆ.22: ಶಿಕ್ಷಕರ ವರ್ಗಾವಣೆ, ನೇಮಕಾತಿ, ಭಡ್ತಿ ಸೇರಿದಂತೆ ಶಿಕ್ಷಕರ ಹಲವು ಸಮಸ್ಯೆಗಳನ್ನು ಪರಿಹರಿಸದೆ ಶಿಕ್ಷಣ ಕ್ಷೇತ್ರದಲ್ಲಿ ಬದಲಾ ವಣೆ ಸಾಧ್ಯವಾಗುವುದಿಲ್ಲ. ಇದು ಸರಕಾರದ ಮುಂದೆ ಇರುವ ಬಹಳ ದೊಡ್ಡ ಸವಾಲು. ಆದುದರಿಂದ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಗೆ ಸಂಬಂಧಿಸಿ ಶಿಕ್ಷಣ ಸಚಿವರೊಂದಿಗೆ ಮಾತುಕತೆ ನಡೆಸಿ ಪರಿಹರಿಸಲು ಪ್ರಯತ್ನಿಸ ಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿಾಸ ಪೂಜಾರಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ ಧಾರವಾಡ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶನಿವಾರ ಆಯೋಜಿಸಲಾದ ಮೈಸೂರು ವಿಭಾಗ ಮಟ್ಟದ ಪದವೀಧರ ಶಿಕ್ಷಕರರ ಸಮಾವೇಶ ಮತ್ತು ಶೈಕ್ಷಣಿಕ ಕಾರ್ಯಾ ಗಾರದಲ್ಲಿ ಭಾವಹಿಸಿ ಅವರು ಮಾತನಾಡುತಿದ್ದರು.

ಈ ಹಿಂದೆ ಒಂದರಿಂದ ಎಂಟನೆ ತರಗತಿವರೆಗೆ ಪದವೀಧರ ಶಿಕ್ಷಕರು ಬೋಧನೆ ಮಾಡುತ್ತಿದ್ದರು. ಆದರೆ ಸರಕಾರದ ಹೊಸ ಸುತ್ತೋಲೆ ಪ್ರಕಾರ ಪದವೀಧರ ಶಿಕ್ಷಕರಿಗೆ 1ರಿಂದ ಐದನೆ ತರಗತಿಗಳನ್ನು ಮಾತ್ರ ಬೋಧನೆ ಮಾಡ ಬೇಕಾಗಿದೆ. ಇದು ಹಿಂಭಡ್ತಿ ಜೊತೆಗೆ ಶಿಕ್ಷಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಇದಕ್ಕಾಗಿ ಪದವೀಧರ ಶಿಕ್ಷಕರ ಬೇಡಿಕೆಯಂತೆ ವೃಂದ ಮತ್ತು ನೇಮಕಾತಿ ನಿಯಮದಲ್ಲಿ ಬದಲಾವಣೆ ಮಾಡಬೇಕಾಗಿದೆ ಎಂದರು.

ಸಮಾವೇಶವನ್ನು ಉದ್ಘಾಟಿಸಿದ ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಸರಕಾರಿ ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಗಳಿದ್ದರೂ ಶಿಕ್ಷಣದ ಗುಣಮಟ್ಟದಲ್ಲಿ ಖಾಸಗಿ ಸಂಸ್ಥೆಗಳಿಗಿಂತ ಉತ್ತಮವಾಗಿದೆ. ಈ ನಿಟ್ಟಿನಲ್ಲಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಯನ್ನು ಹೆಚ್ಚಿಸಿ ಖಾಸಗಿ ಸಂಸ್ಥೆಗಳಿಗೆ ಪೈಪೋಟಿ ನೀಡುವ ಹಂತಕ್ಕೆ ಬೆಳೆಯಬೇಕು. ಕೇವಲ ಅನುದಾನ ದಿಂದ ಮಾತ್ರ ಸರಕಾರಿ ಶಾಲೆಯನ್ನು ಉಳಿಸಲು ಸಾಧ್ಯವಿಲ್ಲ. ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳ ಸಂಖ್ಯೆ ಹೆಚ್ಚಾಗಬೇಕು ಎಂದು ಅಭಿಪ್ರಾಯ ಪಟ್ಟರು.

ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ, ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎಸ್.ವೈ. ಸೊರಟಿ, ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ದಿನಕರ ಶೆಟ್ಟಿ ಅಂಪಾರು, ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಎಚ್.ಆರ್., ರಾಜ್ಯ ಕೋಶಾಧಿಕಾರಿ ಎಸ್.ಸಿ. ಶಾನವಾಡ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ರವೀಂದ್ರ ಹೆಗ್ಡೆ, ಸಂಘ ತಾಲೂಕು ಅಧ್ಯಕ್ಷ ಸದಾರಾಮ ಶೆಟ್ಟಿ, ವಿಶ್ವನಾಥ ಪೂಜಾರಿ, ದಿನಕರ ಶೆಟ್ಟಿ, ಮಂಗಳಾ ಶೆಟ್ಟಿ, ಕೃ್ಣ ಮೊಯಿಲಿ ಮುಖ್ಯ ಅತಿಥಿಗಳಾಗಿದ್ದರು.

ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೊಗೇರ, ಜಿಲ್ಲಾ ಕೋಶಾಧಿಕಾರಿ ರಾಮಚಂದ್ರ ವಾಕುಡ, ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ ನಾಯ್ಕ, ವಸಂತಿ, ಸಹ ಕಾರ್ಯದರ್ಶಿಗಳಾದ ಮಾಲತಿ ನಾಯಕ್, ಹರೀಶ್, ಜ್ಯೋತಿ ಶೆಟ್ಟಿ, ಲಕ್ಷ್ಮೀ, ಶ್ವೇತಾ, ಪ್ರಮುಖರಾದ ಗಣೇಶ್ ಕುಮಾರ್ ಶೆಟ್ಟಿ, ಮಂಜುನಾಥ ದೇವಾಡಿಗ, ಭಾಸ್ಕರ ಪೂಜಾರಿ, ಶ್ರೀನಿವಾಸ ಭಂಡಾರಿ, ಸವಿತಾ, ಯಶೋಧಾ ಹೆಗ್ಡೆ, ಸುಖಲಾ, ರಾಮ ಮೊಗವೀರ, ಸುಬ್ರಹ್ಮಣ್ಯ ಉಪ್ಪುಂದ, ಅನಿಲ್, ಲಕ್ಷ್ಮೀನಾರಾಯಣ ಪೈ, ರವಿ ನಾಯ್ಕು ಕೆ., ರತ್ನಾಕರ ಕೆ.ಎಂ., ಹನುಮಂತಪ್ಪ ಉಪಸ್ಥಿತರಿದ್ದರು.

ಸಂಘದ ಗೌರವಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ ಸ್ವಾಗತಿಸಿದರು. ಜಿಲ್ಲಾಧ್ಯಕ್ಷ ರವಿ ಎಸ್.ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಬ್ರಹ್ಮಣ್ಯ ಉಪ್ಪುಂದ, ದೀಪಾ ಶೆಟ್ಟಿ ಹಾಗೂ ರಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News