ಪ.ಬಂಗಾಳ: ಸ್ವಾಮಿ ವಿವೇಕಾನಂದರ ಪ್ರತಿಮೆ ಧ್ವಂಸ

Update: 2020-02-22 17:19 GMT

ಕೋಲ್ಕತಾ, ಫೆ.22: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬರ್ವಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರ ಎದುರಿಗೆ ಸ್ಥಾಪಿಸಲಾಗಿದ್ದ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಮಾ ಶಾರದಾ ನಾನಿ ದೇವಿ ಶಿಶುಶಿಕ್ಷಾ ಕೇಂದ್ರದ ಎದುರು ರಸ್ತೆಯ ಬದಿ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಗುರುವಾರ ಮಧ್ಯರಾತ್ರಿಯ ಬಳಿಕ ಈ ದುಷ್ಕೃತ್ಯ ನಡೆಸಲಾಗಿದ್ದು ಶುಕ್ರವಾರ ಬೆಳಿಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪ್ರತಿಮೆಯ ಕೆಳಭಾಗಕ್ಕೆ ಹಾನಿ ಎಸಗಲಾಗಿದ್ದು ಸ್ಥಳದಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಅಜೀತ್‌ಸಿಂಗ್ ಯಾದವ್ ಹೇಳಿದ್ದಾರೆ.

ಒಂದೂವರೆ ವರ್ಷದ ಹಿಂದೆಯೂ ಇದೇ ರೀತಿಯ ಕೃತ್ಯ ನಡೆದಿತ್ತು. ಬಳಿಕ ಪ್ರತಿಮೆಯನ್ನು ಪುನರ್ ನಿರ್ಮಿಸಲಾಗಿತ್ತು. ಕಿಡಿಗೇಡಿಗಳನ್ನು ಶೀಘ್ರ ಪತ್ತೆಹಚ್ಚಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News