×
Ad

ಫೆ.29ಕ್ಕೆ ಉಡುಪಿ ಜಿಲ್ಲಾ ಗಮಕ ಸಮ್ಮೇಳನ

Update: 2020-02-22 21:45 IST

ಉಡುಪಿ, ಫೆ.22: ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು ಮತ್ತು ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಇವರು ಆಯೋಜಿಸಿ ರುವ ಜಿಲ್ಲಾ ಗಮಕ ಸಮ್ಮೇಳನ ಫೆ.29ರ  ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಉಡುಪಿಯ ಪೂರ್ಣಪ್ರಜ್ಞ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

ಸಮ್ಮೇಳನದ ಅಧ್ಯಕ್ಷತೆಯನ್ನು ಗಮಕಿ ಬ್ರಹ್ಮಾವರದ ಎಚ್.ಚಂದ್ರಶೇಖರ ಕೆದ್ಲಾಯ ವಹಿಸಲಿದ್ದಾರೆ. ಸ್ಥಳೀಯ ಕಲಾವಿದರಲ್ಲದೆ ಬೆಂಗಳೂರು, ಶಿವಮೊಗ್ಗ ಮೊದಲಾದ ಕಡೆಯ ವಿದ್ವಾಂಸರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಸಕ್ತರೆಲ್ಲರೂ ಈ ಸಮ್ಮೇಳನದಲ್ಲಿ ಬಾಗವಹಿಸಿ ಕನ್ನಡ ಸಾಹಿತ್ಯ ಕಲಾ ಪ್ರಕಾರವನ್ನು ಪ್ರೋತ್ಸಾಹಿಸಬೇಕೆಂದು ಉಡುಪಿ ಜಿಲ್ಲಾ ಗಮಕ ಪರಿಷತ್ತಿನ ಅಧ್ಯಕ್ಷರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News