ಮೂಡುಶೆಡ್ಡೆ: ಸಂಜೀವಿನಿ ಕಟ್ಟಡ ಉದ್ಘಾಟನೆ
Update: 2020-02-22 22:04 IST
ಮೂಡುಶೆಡ್ಡೆ, ಫೆ.22: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೂಡುಶೆಡ್ಡೆ ಗ್ರಾಪಂ ಆವರಣದಲ್ಲಿ ನಿರ್ಮಿಸಲಾದ ನೂತನ ‘ಸಂಜೀವಿನಿ’ ಕಟ್ಟಡವನ್ನು ಶನಿವಾರ ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಈ ಸಂದರ್ಭ ಶಾಸಕರು ಗ್ರಾಮ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ನೀರಿನ ಸಿಂಟೆಕ್ಸ್ ಹಾಗೂ ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ವಿತರಿಸಿದರು.
ಕಾರ್ಯಕ್ರಮದಲ್ಲಿ ಮೂಡುಶೆಡ್ಡೆ ಗ್ರಾಪಂ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ, ಉಪಾಧ್ಯಕ್ಷೆ ಶಾಂಭವಿ, ತಾಪಂ ಸಿಇಒ ಸದಾನಂದ, ತಾಪಂ ಸದಸ್ಯೆ ಕವಿತಾ ಡಿ, ಪಿಡಿಒ ಜಯಪ್ರಕಾಶ, ಕೃಷಿಕ ರಮಾನಾಥ ಅತ್ತರ್, ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.
ಹರೀಶ್ ಮೂಡುಶೆಡ್ಡೆ ಕಾರ್ಯಕ್ರಮ ನಿರೂಪಿಸಿದರು.