ಫೆ.25ರಂದು ಬೆಂಗಳೂರು ವಿಭಾಗ ಮಟ್ಟದ ಜಿಲ್ಲೆಗಳ ಅಹವಾಲು ಸ್ವೀಕೃತಿ ಸಭೆ

Update: 2020-02-22 16:36 GMT

ಬೆಂಗಳೂರು, ಫೆ.22: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸುವ ಕುರಿತು ವರದಿ ನೀಡಲು ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಆಯೋಗವನ್ನು ರಚಿಸಿರುವ ಹಿನ್ನೆಲೆ, ಆಯೋಗದ ವತಿಯಿಂದ ಫೆ.25ರಂದು ವಸಂತನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 10.30 ಗಂಟೆಗೆ ಬೆಂಗಳೂರು ವಿಭಾಗ ಮಟ್ಟದ ಜಿಲ್ಲೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಖಂಡರು ಮತ್ತು ಸಂಘಟನೆಗಳಿಂದ ಅಹವಾಲು ಸ್ವೀಕೃತಿ ಮತ್ತು ಸಮಾಲೋಚನೆ ಸಭೆಯನ್ನು ನ್ಯಾ.ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದಲ್ಲಿ ಏರ್ಪಡಿಸಲಾಗಿದೆ.

ಈ ಸಭೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಸಿ-ಎಸ್ಟಿ ಮುಖಂಡರು ಅಥವಾ ಸಂಘಟನೆಗಳು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ನೀಡಬಹುದಾಗಿದೆ. ಸಮಾಲೋಚನಾ ಸಭೆಯಲ್ಲಿ ಮೌಖಿಕವಾಗಿ ವಿಚಾರ ಅಥವಾ ಅಭಿಪ್ರಾಯಗಳನ್ನು ತಿಳಿಸಬಯಸುವವರು, ಕಾರ್ಯಕ್ರಮ ಪ್ರಾರಂಭವಾಗುವ ಒಂದು ಗಂಟೆ ಮೊದಲು ಸಭಾಂಗಣದ ಹೊರಗೆ ತೆರೆಯಲಾಗುವ ಕೌಂಟರ್‌ಗಳಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

ಹೆಸರನ್ನು ನೋಂದಾಯಿಸಿಕೊಂಡವರಿಗೆ ಮಾತ್ರ ಸಮಾಲೋಚನೆಯಲ್ಲಿ ತಮ್ಮ ಅಭಿಪ್ರಾಯವನ್ನು ಮೌಖಿಕವಾಗಿ ತಿಳಿಸಲು ಅವಕಾಶವಿರುತ್ತದೆ ಹಾಗೂ ವಿಷಯಕ್ಕೆ ಸಂಬಂಧಪಟ್ಟಂತೆ ಹೆಚ್ಚು ಸಮಯ ತೆಗೆದುಕೊಳ್ಳದೆ ಸಂಕ್ಷಿಪ್ತವಾಗಿ ತಮ್ಮ ಅಭಿಪ್ರಾಯವನ್ನು ಮಂಡಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ :080-29787448.

ಅಥವಾ ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು, ದೇವನಹಳ್ಳಿ ದೂ: 080-27681784, ದೊಡ್ಡಬಳ್ಳಾಪುರ ದೂ: 080-27623681, ಹೊಸಕೋಟೆ ದೂ: 080-27931528, ಹಾಗೂ ನೆಲಮಂಗಲ ದೂ: 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹನುಮಂತರಾಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News