×
Ad

ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಮಾತೃಭಾಷೆ ಪೂರಕ: ಪಿಇಎಸ್ ವಿವಿ ಉಪಕುಲಪತಿ ಡಾ.ಸೂರ್ಯಪ್ರಸಾದ್

Update: 2020-02-22 22:33 IST

ಬೆಂಗಳೂರು, ಫೆ.22: ಮಾತೃಭಾಷೆ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದು ಪಿಇಎಸ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಜೆ.ಸೂರ್ಯಪ್ರಸಾದ್ ಹೇಳಿದರು.

ಶನಿವಾರ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಮಾತೃಭಾಷಾ ದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಅಧ್ಯಾಪಕರ ಪುನಶ್ಚೇತನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಮಾತೃಭಾಷೆ ಪೂರಕವಾಗಿದ್ದು, ಬೌದ್ಧಿಕ ಜ್ಞಾನವು ಮಾತೃಭಾಷೆಯ ಮೂಲಕ ದೊರೆತರೆ ಪರಿಣಾಮಕಾರಿಯಾಗಿರುತ್ತದೆ. ಇಂತಹ ಕಾರ್ಯಕ್ರಮಗಳನ್ನು ವಿಶ್ವವಿದ್ಯಾಲಯಗಳಲ್ಲಿ ಆಯೋಜಿಸುತ್ತಿರಬೇಕು. ಇದರಿಂದ ಅಧ್ಯಾಪಕರಲ್ಲಿನ ಜ್ಞಾನದ ಹರವು ವಿಸ್ತಾರವಾಗುತ್ತದೆ. ಹೀಗಾಗಿ ಅಧ್ಯಾಪಕರು ಇಂತಹ ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳ 60ಕ್ಕೂ ಹೆಚ್ಚು ಅಧ್ಯಾಪಕರು, ಸಾಹಿತ್ಯಾಸಕ್ತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಪಿಇಎಸ್ ಶಿಕ್ಷಣ ಸಂಸ್ಥೆಯ ಕುಲಸಚಿವ ಡಾ.ಕೆ.ಎಸ್.ಶ್ರೀಧರ್, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ರಾಜಪ್ಪ ದಳವಾಯಿ, ಪಿಇಎಸ್ ವಾಣಿಜ್ಯ ವಿಭಾಗದ ನಿರ್ದೇಶಕ ಡಾ.ಎ.ವಿ.ಚಂದ್ರಶೇಖರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News