ಅಮೂಲ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ: ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್
Update: 2020-02-22 22:56 IST
ಮೈಸೂರು,ಫೆ.22: ನಮ್ಮ ದೇಶದ ವಿರುದ್ಧವಾಗಿ ಅಮೂಲ್ಯ ಘೋಷಣೆ ಕೂಗಿದ್ದಾಳೆ. ಇದನ್ನು ನಾನು ಖಂಡಿಸುತ್ತೇನೆ. ಕಾನೂನು ಕ್ರಮ ಕೈಗೊಳ್ಳಿ ಎಂದು ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಆಗ್ರಹಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕಾರ್ಯಕ್ರಮಯೊಂದರಲ್ಲಿ ಅಮೂಲ್ಯ ದೇಶದ ವಿರುದ್ಧವಾಗಿ ಘೋಷಣೆ ಕೂಗಿದ್ದಾರೆ. ಇದು ಸರಿಯಲ್ಲ, ನಮ್ಮ ದೇಶ ಮೊದಲು. ನಾವು ಭಾರತೀಯರು. ನಮ್ಮ ದೇಶದ ಗೌರವ, ಘನತೆಯನ್ನು ಎಲ್ಲಾ ಕಡೆ ಎತ್ತಿ ಹಿಡಿಯಬೇಕಿದೆ. ಯಾವ ಸಂದರ್ಭದಲ್ಲಿ ಆ ವಿದ್ಯಾರ್ಥಿ ದೇಶದ ವಿರುದ್ಧ ಘೋಷಣೆ ಕೂಗಿದ್ದಾರೆ, ಅವಳ ಹಿಂದೆ ಯಾರಿದ್ದಾರೆ ಅಂತ ತನಿಖೆ ಆಗಬೇಕು. ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕೆಂದು ಆಗ್ರಹಿಸಿದರು.