ದೇಶದಲ್ಲಿ ಆರ್ಥಿಕ, ಸಾಮಾಜಿಕ ಅಸಮಾತೋಲನ: ಡಾ.ಮೋಹನ್ ಆಳ್ವ

Update: 2020-02-23 14:23 GMT

 ಉಡುಪಿ, ಫೆ.23: ದೇಶಕ್ಕೆ ಸ್ವಾತಂತ್ರ್ಯ ದೊರೆತು 70ವರ್ಷಗಳು ಕಳೆದರೂ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಂತರ ಹಾಗೂ ಸಮಾಜದ ನಡುವೆ ಕಂದಕ ಬಹಳಷ್ಟು ದೊಡ್ಡ ಮಟ್ಟದಲ್ಲಿದೆ. ಈ ಅಸಮತೋಲನ ಸರಿದೂಗಿಸಲು ಪ್ರತಿಯೊಬ್ಬರು ಚಿಂತನೆ ಮಾಡಬೇಕಾಗಿದೆ ಎಂದು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹೇಳಿದ್ದಾರೆ.

ಉಡುಪಿ ಬಂಟರ ಸಂಘದ 25ನೆ ವರ್ಷದ ವಾರ್ಷಿಕ ಅಧಿವೇಶನದ ಪ್ರಯುಕ್ತ ರವಿವಾರ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ವೈದ್ಯಕೀಯ ನೆರವು ವಿತರಣಾ ಕಾರ್ಯಕ್ರಮ ದಲ್ಲಿ ಭಾವಹಿಸಿ ಅವರು ಮಾತನಾಡುತಿದ್ದರು.

ದೇಶದಲ್ಲಿ ಶ್ರೀಮಂತರು, ಉನ್ನತ ವ್ಯಾಸಂಗ, ಸಾಮಾಜಿಕವಾಗಿ ಮುಂಚೂಣಿ ಯಲ್ಲಿರುವವರು ಸಾಕಷ್ಟು ಮಂದಿ ಇದ್ದಾರೆ. ಅದೇ ರೀತಿ ಬಡವರು, ಅನಕ್ಷರಸ್ಥರು, ಸಂಕಷ್ಟದಲ್ಲಿರುವ ಕುಟುಂಬಗಳು ಕೂಡ ಇವೆ. ಈ ಅಂತರ ಇತರ ಮುಂದುವರೆದ ದೇಶಗಳಿಗಿಂತ ಭಾರತದಲ್ಲಿ ಬಹಳಷ್ಟು ಹೆಚ್ಚಿದೆ. ಹೀಗೆ ಬಂಟ ಸಮುದಾಯದಲ್ಲೂ ಸಾಕಷ್ಟು ಮಂದಿ ಸಮಸ್ಯೆಗೆ ಸಿಲುಕಿದವರಿದ್ದಾರೆ. ಈ ನಿಟ್ಟಿನಲ್ಲಿ ಸಮಾಜದಲ್ಲಿರುವ ಗಣ್ಯರು ಈ ಕುರಿ ತು ಚಿಂತನೆ ಮಾಡಬೇಕು ಎಂದರು.

ಕಾರ್ಯಕ್ರಮವನ್ನು ಬೆಂಗಳೂರು ಎಂಆರ್‌ಜಿ ಗ್ರೂಪ್ಸ್‌ನ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಪುರು ಷೋತ್ತಮ ಪಿ.ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ಬಂಟ ಸಮುದಾಯದ ಸಾಧಕರಾದ ಸಮಾಜ ಸೇವಕ ಕೆ.ಪ್ರಕಾಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ತನುಶ್ರೀ ಪಿತ್ರೋಡಿ, ಮೋಹನ್ ಆಳ್ವ ಅವರನ್ನು ಸನ್ಮಾನಿಸಲಾಯಿತು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎಂಆರ್‌ಪಿಎಲ್‌ನ (ಸಿಎಸ್‌ಆರ್) ಮ್ಯಾನೇಜರ್ ವೀಣಾ ಟಿ. ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ಜಯರಾಜ್ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು.

ಶ್ವೇತಾ ಜಯಕರ ಶೆಟ್ಟಿ, ನಾಗೇಶ್ ಹೆಗ್ಡೆ, ಪುಣೆ ಬಂಟರ ಸಂಘದ ಪ್ರವೀಣ್ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ಉದ್ಯಮಿ ಮನೋಹರ್ ಶೆಟ್ಟಿ, ರೋಹಿತ್ ಕಟೀಲ್, ಸಂಘದ ಪ್ರಧಾನ ಕಾರ್ಯದರ್ಶಿ ಅಮಿತ್ ಕುಮಾರ್ ಶೆಟ್ಟಿ ಕೆ., ಮನೋಹರ್ ಶೆಟ್ಟಿ ತೋನ್ಸೆ, ಮೋಹನ ಶೆಟ್ಟಿ ಮೂಡನಿಡಂಬೂರು, ವೀಣಾ ಶೆಟ್ಟಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಹಾಯಧನ ವಿತರಣೆ, ಪ್ರತಿಭಾ ಪುರಸ್ಕಾರ, ಅಂಗವಿಕರಿಗೆ ಆರ್ಥಿಕ ಸಹಾಯವನ್ನು ನೀಡಲಾಯಿತು ಬಂಟರ ಸಂಘದ ಗೌರವಾಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿದರು. ಸತೀಶ್ಚಂದ್ರ ಶೆಟ್ಟಿ ಹಾಗೂ ವಿಜೇತಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News