ಖಾಸಗಿ ವಿಡಿಯೊ ಚಿತ್ರೀಕರಿಸಿ ಯುವತಿಗೆ ಬೆದರಿಕೆ ಆರೋಪ: ಯುವಕನ ಬಂಧನ

Update: 2020-02-23 15:05 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.23: ಯುವತಿಯ ಖಾಸಗಿ ವಿಡಿಯೊ ತೋರಿಸಿ, ಬೆದರಿಕೆ ಹಾಕಿದ್ದ ಆರೋಪದಡಿ ಯುವಕನೋರ್ವನನ್ನು ಕೆ.ಆರ್.ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ದೀಪಕ್ ಎಂದು ಪೊಲೀಸರು ಗುರುತಿಸಿದ್ದಾರೆ.

ಯುವತಿಯ ಖಾಸಗಿ ಫೋಟೊ, ವಿಡಿಯೊವನ್ನು ತೋರಿಸಿ, ಯುವತಿಗೆ ಹಣ ನೀಡುವಂತೆ ಒತ್ತಾಸುತ್ತಿದ್ದ ಮತ್ತು ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಡುವುದಾಗಿ ದೀಪಕ್ ಬೆದರಿಕೆ ಹಾಕಿದ್ದ ಎಂದು ಆರೋಪಿಸಿ ಯುವತಿ ನೀಡಿದ ದೂರಿನ್ವಯ ದೀಪಕ್ ಅನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ದೀಪಕ್ ಮಧ್ಯಪ್ರದೇಶದ ಬೇತುಲ್ ನಗರ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಬಿಎಸ್ಸಿ ಪದವಿ ವ್ಯಾಸಂಗ ಮಾಡಿದ್ದಾನೆ. ಮತ್ತು ವೈಟ್‌ಫಿಲ್ಡ್‌ನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಯುವತಿಯ ಖಾಸಗಿ ವಿಡಿಯೊ ಚಿತ್ರೀಕರಿಸಿ ಆಕೆಯನ್ನು ಹೆದರಿಸಿ ಹಣ ನೀಡುವಂತೆ ಒತ್ತಾಯಿಸುತ್ತಿದ್ದ. ಪೊಲೀಸರು ಆತನ ಕರೆಗಳ ನೆಟ್‌ವರ್ಕ್ ಆಧರಿಸಿ ಆತ ಇರುವ ಸ್ಥಳ ಪತ್ತೆಹಚ್ಚಿ ಕೃತ್ಯಕ್ಕೆ ಬಳಸುತ್ತಿದ್ದ ಮೊಬೈಲ್ ಜಪ್ತಿ ಮಾಡಲಾಗಿದೆ ಎಂದು ವೈಟ್‌ಫೀಲ್ಡ್‌ನ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News