ಡೊನಾಲ್ಡ್ ಟ್ರಂಪ್ ಭೇಟಿಯಿಂದ ಭಾರತ –ಯುಎಸ್ ನಡುವಿನ ಸ್ನೇಹ ವೃದ್ಧಿ : ಪ್ರಧಾನಿ ಮೋದಿ

Update: 2020-02-24 04:42 GMT

ಹೊಸದಿಲ್ಲಿ, ಫೆ.24: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಉಭಯ ರಾಷ್ಟ್ರಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮನಕ್ಕೆ ಭಾರತ ಕಾಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ, ಟ್ರಂಪ್  ಭೇಟಿ ಉಭಯ ದೇಶಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಪ್ರತಿಪಾದಿಸಿದರು.

"ಭಾರತ ನಿಮ್ಮ ಆಗಮನಕ್ಕಾಗಿ ಕಾಯುತ್ತಿದೆ! ನಿಮ್ಮ ಭೇಟಿ ಖಂಡಿತವಾಗಿಯೂ ನಮ್ಮ ರಾಷ್ಟ್ರಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಯುಎಸ್ ಪ್ರಥಮ ಮಹಿಳೆ ಜೊತೆ ಭಾರತಕ್ಕೆ ತೆರಳುತ್ತಿದ್ದೇನೆ ಎಂದು ಡೊನಾಲ್ಡ್ ಟ್ರಂಪ್ ನೀಡಿದ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪಿಎಂ "ಅಹ್ಮದಾಬಾದ್ ನಲ್ಲಿ  ಶೀಘ್ರದಲ್ಲೇ ನಿಮ್ಮನ್ನು ಭೇಟಿ ಮಾಡುತ್ತೇವೆ" ಎಂದು ಹೇಳಿದರು.

ನಿಮ್ಮ ಭೇಟಿ ಖಂಡಿತವಾಗಿಯೂ ನಮ್ಮ ರಾಷ್ಟ್ರಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ಸೋಮವಾರ ಮಧ್ಯಾಹ್ನ  ಅಹ್ಮದಾಬಾದ್  ತಲುಪಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News