ಮಂಚಿ: ರಕ್ತದಾನ ಶಿಬಿರ, ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಸನ್ಮಾನ

Update: 2020-02-24 06:40 GMT

ಮಂಚಿ, ಫೆ.24: ಫ್ಯೂಚರ್ ಕ್ರಿಯೇಟರ್ಸ್ ಚಾರೀಟೇಬಲ್ ಟ್ರಸ್ಟ್ ಅಸೋಸಿಯೇಶನ್(ರಿ), ಶೈನ್ ಗೈಸ್ ಕುಕ್ಕಾಜೆ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಫೆ.23ರಂದು ಮಂಚಿ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು. 

ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ ಕಾರ್ಯಕ್ರಮ ಉದ್ಘಾಟಿಸಿದರು. ಗಫ್ಫಾರ್ ಸಾಗರ್ ಅಧ್ಯಕ್ಷತೆ ವಹಿಸಿದ್ದರು.

ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್, ಹನೀಫ್ ಹಾಜಿ ಕಲ್ಲಡ್ಕ, ರೆ. ಫಾ.ಹೆನ್ರಿ ಡಿಸೋಜ, ಇಸ್ಮಾಯೀಲ್ ಕೆ.ಎ.ಆರ್., ಮೋಹನ್ ದಾಸ್, ಅಶ್ರಫ್ ಕಲ್ಕಟ್ಟ, ಅಬ್ದುಲ್ ಕರೀಂ, ಕೆ.ಎಂ.ಶರೀಫ್, ಹಸೈನಾರ್, ಆಶಿಕ್ ಕುಕ್ಕಾಜೆ, ರಫೀಕ್, ನಝೀರ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಇದರ ಕಾರ್ಯನಿರ್ವಾಹಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, "ನನಗೆ ರಕ್ತದಾನ ಮಾಡಲು ಅತಿಯಾದ ಆಗ್ರಹವಿದೆ. ಆದರೆ ನನ್ನ ದೇಹಕ್ಕೆ ಆ ಸಾಮರ್ಥ್ಯವಿಲ್ಲ" ಎನ್ನುತ್ತಾ ರಕ್ತದಾನ ಮಾಡುವ ಯುವ ಸಮೂಹಕ್ಕೆ ರಕ್ತದಾನ ಮಾಡಲು ಪ್ರೇರೆಪಿಸಿದರು.

ಶಿಬಿರದಲ್ಲಿ ಒಟ್ಟು 100 ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News