ತಂಬಾಕು ವಸ್ತು ಮಾರಾಟಗಾರರ ಮೇಲೆ ಸೂಕ್ತ ಕ್ರಮ: ದ.ಕ. ಜಿಲ್ಲಾಧಿಕಾರಿ

Update: 2020-02-24 14:49 GMT

ಮಂಗಳೂರು, ಫೆ.24: ಕಾನೂನುಬಾಹಿರವಾಗಿ ತಂಬಾಕು ವಸ್ತುಗಳನ್ನು ವ್ಯಾಪಾರ ಮಾಡುವವರ ಮೇಲೆ ಹದ್ದಿನ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು.

ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದ.ಕ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.

ಶಾಲಾ ಕಾಲೇಜು ಸಮೀಪದ ಪರಿಸರದಲ್ಲಿ ತಂಬಾಕು ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈ ಹಿಂದೆ 200 ರೂ. ದಂಡ ಇಧಿಸಿದ್ದರೂ ಮತ್ತೆ ಅದೇ ವ್ಯಾಪಾರವನ್ನು ಮುಂದುವರೆಸುತ್ತಿರುವುದು ಸಂಬಂಧ ಪಟ್ಟ ಇಲಾಖೆಯ ಗಮನಕ್ಕೆ ಬಂದಿದೆ. ಇಂತಹ ಪ್ರಕ್ರಿಯೆಯನ್ನು ಮುಂದುವರೆಸುತ್ತಿರುವ ಅಪರಾಧಿಗಳನ್ನು ಪತ್ತೆ ಹಚ್ಚಬೇಕು ಮತ್ತು ಅಂತಹ ವ್ಯಾಪಾರಸ್ಥರ ಅಂಗಡಿಗಳನ್ನು ಗುರುತಿಸಿ ಪಟ್ಟಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಲಾ, ಕಾಲೇಜು ವ್ಯಾಪ್ತಿಯ ಅಂಗಡಿಗಳಲ್ಲಿ ತಂಬಾಕು ವಸ್ತುಗಳನ್ನು ಮಾರಾಟ ಮಾಡುತ್ತಿರುವ ಕುರಿತು ಸಂಬಂಧಪಟ್ಟ ಶಾಲಾ ಸಿಬ್ಬಂದಿ ವರ್ಗವು ಗಮನ ಹರಿಸಬೇಕು ಮತ್ತು ಶಾಲಾ ಕಾಲೇಜು ವ್ಯಾಪ್ತಿಯ ಅಂಗಡಿಗಳಿಗೆ ಆಯಾ ಸಂಸ್ಥೆಗಳಿಂದ ತಂಬಾಕು ಮುಕ್ತ ಅಂಗಡಿ ಎಂದು ಘೋಷಣೆ ಹೊರಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. 

ಸಭೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News