ದ.ಕ.ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಆರ್.ಸಿ. ನಾರಾಯಣ

Update: 2020-02-24 16:48 GMT

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಆರ್ ಸಿ ನಾರಾಯಣ ರೆಂಜ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ ಅವರು ನಿಯುಕ್ತಿಗೊಳಿಸಿದ್ದಾರೆ.

ನೂತನ ಅಧ್ಯಕ್ಷ ಆರ್ ಸಿ ನಾರಾಯಣ ರೆಂಜ ಅವರು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ, ದ.ಕ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಬಿಜೆಪಿ ಮಾಧ್ಯಮ ಪ್ರಮುಖ್‍ರಾಗಿ, ಪುತ್ತೂರು ಬಿಜೆಪಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಕಾರ್ಯನಿರ್ವಹಣಾಧಿಕಾರಿಯಾಗಿ, ಪುತ್ತೂರು ಬಿಲ್ಲವ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಕುಂಬ್ರ ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಮೂರ್ತೆದಾರರರ ಮಹಾಮಂಡಲದ ನಿರ್ದೇಶಕರಾಗಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ, ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾಗಿ, ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್‍ನ ಗೌರವ ಸಲಹೆಗಾರರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News