ಕಂಬಳ ಕೋಣಗಳ ಓಟಗಾರ ಶ್ರೀನಿವಾಸ ಗೌಡಗೆ ವೀರೇಂದ್ರ ಹೆಗ್ಗಡೆ ಸನ್ಮಾನ

Update: 2020-02-24 17:17 GMT

ಬೆಳ್ತಂಗಡಿ:  ಸೋಲು-ಗೆಲುವಿನ ಬಗ್ಯೆಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಸ್ಥಿಮಿತ ಕಳೆದುಕೊಳ್ಳಬಾರದು ಎಂದರು.

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲಕ ಸತೀಶ್ಚಂದ್ರ ಸಾಲಿಯಾನ್‍ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರುಗಳಾದ ಜ್ವಾಲಾ ಪ್ರಸಾದ್‍ , ಸುಭಾಶ್ಚಂದ್ರಚೌಟ, ಮೂಡಬಿದ್ರೆ, ಮಂಗಳೂರು ಎ.ಪಿ.ಎಂ.ಸಿ.ಅಧ್ಯಕ್ಷ ಪ್ರವೀಣಕುಮಾರ್‍ಜೈನ್, ಚಿಂತನ್‍ ಲೋಬೊ, ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News