ಚೀನಾಕ್ಕೆ ವೈದ್ಯಕೀಯ ಉಪಕರಣಗಳ ರಫ್ತು: ಭಾರತ ನಿರ್ಬಂಧ

Update: 2020-02-24 17:57 GMT

ಹೊಸದಿಲ್ಲಿ, ಫೆ. 24: ಭಾರತದಲ್ಲಿ ವೈದ್ಯಕೀಯ ಉಪಕರಣಗಳ ಕೊರತೆ ಇರುವುದರಿಂದ ನಿರ್ದಿಷ್ಟ ವೈದ್ಯಕೀಯ ಉಪಕರಣಗಳ ರಫ್ತಿನ ಮೇಲೆ ಕೆಲವು ನಿರ್ಬಂಧ ಹೇರಲಾಗಿದೆ. ಅಲ್ಲದೆ, ಕೊರೋನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗೆ ಅನುಗುಣವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ರವಿವಾರ ಹೇಳಿದೆ.

 ಚೀನಾದಲ್ಲಿ ಸಾಂಕ್ರಾಮಿಕ ರೋಗ ತಡೆಯುವಲ್ಲಿ ಹೆಚ್ಚು ಅಗತ್ಯವಾಗಿರುವ ವೈದ್ಯಕೀಯ ಉಪಕರಣಗಳ ರಫ್ತನ್ನು ಭಾರತ ನಿಷೇಧಿಸಿದೆ ಎಂದು ಚೀನಾದ ವೈದ್ಯಕೀಯ ಸಂಸ್ಥೆಗಳು, ದತ್ತಿ ಸಂಸ್ಥೆಗಳು ಹಾಗೂ ಸ್ಥಳೀಯ ಆಡಳಿತದ ಆರೋಪಕ್ಕೆ ಪ್ರತಿಕ್ರಿಯೆಯಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ಹೇಳಿಕೆ ನೀಡಿದ್ದಾರೆ. ಇತರ ದೇಶಗಳಂತೆ ಕೋವಿಡ್-19 ಹರಡುವುದನ್ನು ತಡೆಯಲು ಅಗತ್ಯದ ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿ ಭಾರತದ ಶತಕೋಟಿಗಿಂತ ಅಧಿಕ ಇರುವ ಜನರಿಗೆ ಇದೆ. ಇದನ್ನು ಸೂಕ್ತವಾಗಿ ನಿರ್ವಹಿಸದೇ ಇದ್ದರೆ, ಜಾಗತಿಕ ಅಪಾಯಕ್ಕೆ ಕಾರಣವಾಗಬಹುದು ಎಂದು ಅವರು ಹೇಳಿದ್ದಾರೆ.

ಕೆಲವು ವೈದ್ಯಕೀಯ ಉಪಕರಣಗಳ ರಫ್ತಿನ ಮೇಲೆ ನಿರ್ಬಂಧ ಹೇರುವುದಕ್ಕೆ ಭಾರತ ಸರಕಾರಕ್ಕೆ ಒಂದು ಬಾರಿ ವಿನಾಯತಿ ನೀಡುವಂತೆ ಕುಮಾರ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News