ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

Update: 2020-02-24 18:04 GMT

ಬೆಂಗಳೂರು, ಫೆ.24: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪತ್ರದ ಆಧಾರದ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ದಿನಾಂಕಗಳಂದು (ಮಾ.4ರಿಂದ 23ರವರೆಗೆ) ಎಲ್ಲಾ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಬಸ್ಸಿನಲ್ಲಿ ಪ್ರಯಾಣಿಸುವಾಗ ದ್ವಿತೀಯ ಪಿಯುಸಿ ಪ್ರವೇಶ ಪತ್ರವನ್ನು (ಅಡ್ಮಿಷನ್ ಟಿಕೆಟ್) ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News