ರಾಷ್ಟ್ರಪತಿ ಭವನದಲ್ಲಿ ಟ್ರಂಪ್‌ಗೆ ಭವ್ಯ ಸ್ವಾಗತ

Update: 2020-02-25 05:17 GMT

    ಹೊಸದಿಲ್ಲಿ, ಫೆ.25: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಫಸ್ಟ್ ಲೇಡಿ ಮೆಲಾನಿಯಾ ಟ್ರಂಪ್ ಅವರನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್, ಅವರ ಪತ್ನಿ ಸವಿತಾ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಬೆಳಗ್ಗೆ ಆತ್ಮೀಯವಾಗಿ ಸ್ವಾಗತಿಸಿದರು.

ಟ್ರಂಪ್‌ಗೆ ರತ್ನಗಂಬಳಿ ಹಾಸಿ ಗೌರವ ವಂದನೆ ಸಲ್ಲಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ಟ್ರಂಪ್ ಗೌರವ ವಂದನೆ ಸ್ವೀಕರಿಸಿದರು. ಟ್ರಂಪ್ ದಂಪತಿ ರಾಷ್ಟ್ರಪತಿ ಭವನದಿಂದ ರಾಜ್‌ಘಾಟ್‌ಗೆ ತೆರಳಿ ಅಲ್ಲಿ ಅವರು ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ್ದಾರೆ.

ಬೆಳಗ್ಗೆ 11ಕ್ಕೆ ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ಮೋದಿ ಜೊತೆಗೆ ಟ್ರಂಪ್ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12:40ಕ್ಕೆ ಒಪ್ಪಂದಗಳಿಗೆ ಸಹಿ ಅಥವಾ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಿದ್ದಾರೆ. ಸಂಜೆ 7:30ಕ್ಕೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಕೋವಿಂದ್‌ರನ್ನು ಭೇಟಿಯಾಗಲಿದ್ದು,ರಾತ್ರಿ 10 ಗಂಟೆಗೆ ಅಮೆರಿಕಕ್ಕೆ ನಿರ್ಗಮಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News