ಬಿಜೆಪಿ ನಾಯಕರ ಪ್ರಚೋದನೆಯಿಂದ ದಿಲ್ಲಿಯಲ್ಲಿ ಹಿಂಸಾಚಾರ: ಮಾಜಿ ಸಿಎಂ ಸಿದ್ದರಾಮಯ್ಯ

Update: 2020-02-25 12:13 GMT

ಬೆಂಗಳೂರು, ಫೆ.25: ಏಳು ಜೀವಗಳನ್ನು ಬಲಿ ತೆಗೆದುಕೊಂಡ ದಿಲ್ಲಿ ಗಲಭೆ ಅತ್ಯಂತ ಖೇದಕರವಾದರೂ ಅನಿರೀಕ್ಷಿತವೇನಲ್ಲ. ಬಿಜೆಪಿಯ ಸಚಿವರು, ಶಾಸಕರು ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾಗಲೂ ‘ಸರ್ವಶಕ್ತ’ ಗೃಹ ಸಚಿವ ಅಮಿತ್ ಶಾ ಅವರು ಕಣ್ಣುಮುಚ್ಚಿ ಕೂತಿರುವುದೇ ಈ ಗಲಭೆಗೆ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ದಿಲ್ಲಿಯಲ್ಲಿ ಹಿಂಸಾಚಾರಕ್ಕೆ ಬಹಿರಂಗವಾಗಿ ಪ್ರಚೋದನೆ ನೀಡಿರುವ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರನ್ನು ತಕ್ಷಣ ಬಂಧಿಸಬೇಕು. ಗಲಭೆಗ್ರಸ್ತ ಪ್ರದೇಶಕ್ಕೆ ಅವಶ್ಯಕ ಪ್ರಮಾಣದಲ್ಲಿ ಪೊಲೀಸರನ್ನು ನೇಮಿಸಿ ಭೀತಿಗ್ರಸ್ತ ಜನರಲ್ಲಿ ವಿಶ್ವಾಸ ತುಂಬಬೇಕು ಎಂದು ಅವರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News