ಶಾಸಕ ಯತ್ನಾಳ್ ರ ಬಾಯಿ ಮುಚ್ಚಿಸಿ, ಇಲ್ಲವಾದರೆ....: ಬಿಎಸ್‌ವೈಗೆ ಸಿದ್ದರಾಮಯ್ಯ ಎಚ್ಚರಿಕೆ

Update: 2020-02-25 12:40 GMT

ಬೆಂಗಳೂರು, ಫೆ.25: ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರೇ, ಹಿರಿಯ ಸ್ವಾತಂತ್ರ್ಯ‌ಹೋರಾಟಗಾರರಾದ ಎಚ್.ಎಸ್ ದೊರೆಸ್ವಾಮಿಯವರನ್ನು ನಿಂದಿಸಿ ಅತ್ಯಂತ‌ ಕೀಳಾಗಿ ಮಾತನಾಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಂಡು ಬಾಯಿ ಮುಚ್ಚಿಸಿ, ಇಲ್ಲವಾದರೆ ಅವರ ಅಭಿಪ್ರಾಯ ನಿಮ್ಮ ಸರ್ಕಾರದ ಅಭಿಪ್ರಾಯ ಎಂದು ಒಪ್ಪಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಮಂಗಳವಾರ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರೇ, ಕೈ ಮೀರಿ ಹೋಗುವ ಮುನ್ನ ಎಚ್ಚೆತ್ತುಕೊಳ್ಳಿ. ದಿಲ್ಲಿ ಗಲಭೆ ಕಣ್ಣ ಮುಂದಿದೆ. ಒಬ್ಬರಾದ ಮೇಲೆ ಒಬ್ಬರಂತೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ರಾಜ್ಯದ ಬಿಜೆಪಿ ನಾಯಕರ ನಾಲಗೆಗೆ ತಕ್ಷಣ ಕಡಿವಾಣ ಹಾಕದಿದ್ದರೆ ಅನಾಹುತ ಕಾದಿದೆ ಎಂದು ಎಚ್ಚರಿಸಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಪಾಕಿಸ್ತಾನದ ಏಜೆಂಟ್ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಲ್ಲದೇ, ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದು, ಸದಾ ಪಾಕಿಸ್ತಾನದ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಾನೆ. ಈಗ ಆ ಮುದುಕ ಎಲ್ಲಿದ್ದಾನೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News