ಮಾ.1ಕ್ಕೆ ಕಾರ್ಮಿಕ ಸಮ್ಮಾನ ದಿನಾಚರಣೆ
Update: 2020-02-25 19:21 IST
ಉಡುಪಿ, ಫೆ.25: ಜಿಲ್ಲಾ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ದ್ರತಾ ಮಂಡಳಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಮಿಕ ಸಮ್ಮಾನ ದಿನಾಚರಣೆ ಮಾ.1ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರಿೀನಿವಾಸ ಪೂಜಾರಿ ಉಪಸ್ಥಿತರಿರುವರು.