ಬೈಂದೂರು: ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ

Update: 2020-02-25 13:53 GMT

ಉಡುಪಿ, ಫೆ.25: ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಬೈಂದೂರು ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೊಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ ಒಟ್ಟು 20 ಪ್ರಕರಣ ದಾಖಲಿಸಿ 2400 ರೂ. ದಂಡ ವಸೂಲಿ ಮಾಡಲಾಯಿತು.

ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ,ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಉಮೇಶ್ ನಾಯಕ್, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಉಡುಪಿಯ ಹಿರಿಯ ಆರೋಗ್ಯ ಸಹಾಯಕ ಸತೀಶ್ ರಾವ್, ಹಿರಿಯ ಆರೋಗ್ಯ ಸಹಾಯಕ ರಮೇಶ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ದತ್ತಾತ್ರೇಯ, ಜಿಲ್ಲಾ ಎನ್.ಸಿ.ಡಿ ಘಟಕದ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ. ಅಪನ್, ಜಿಲ್ಲಾ ರಾಷ್ಟ್ರೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ ಎನ್.ಟಿ.ಸಿ.ಪಿ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜ ಕಾರ್ಯಕರ್ತೆ ಶೈಲಾ ಶ್ಯಾಮನೂರ್ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News