ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಿಸಿ ರಾಜ್ಯ ಸರಕಾರ ಆದೇಶ

Update: 2020-02-25 15:02 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.25: ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಶೇ.12ರಷ್ಟು ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬಸ್ ಪ್ರಯಾಣ ದರವನ್ನು ಪರಿಷ್ಕರಿಸುವ ಸಂಬಂಧ ಸಲ್ಲಿಸಿರುವ ಪ್ರಾಸ್ತಾವನೆಯನ್ನು ಪರಿಶೀಲಿಸಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ಶೇ.12ರಷ್ಟು ಪ್ರಯಾಣ ದರವನ್ನು ಏರಿಸಲು ಸರಕಾರ ಅನುಮೋದನೆ ನೀಡಿದೆ ಎಂದು ಸಾರಿಗೆ ಅಧೀನ ಕಾರ್ಯದರ್ಶಿ ಸತ್ಯವತಿ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಈಗ 100 ರೂ.ಟಿಕೆಟ್ ದರ 12 ರೂ.ಏರಿಕೆ ಆಗಿದ್ದರೆ 300 ರೂ.ಟಿಕೆಟ್ ದರ ಇದ್ದರೆ ಇನ್ನು ಮುಂದೆ ನೀವು 36 ರೂ. ಹೆಚ್ಚು ನೀಡಿ ಒಟ್ಟು 336 ರೂ. ನೀಡಬೇಕಾಗುತ್ತದೆ. 500 ರೂ.ಟಿಕೆಟ್ ದರ ಇದ್ದರೆ ನೀವು 60 ರೂ.ಹೆಚ್ಚಿಗೆ ನೀಡಬೇಕಾಗುತ್ತದೆ. 1000 ರೂ.ಟಿಕೆಟಿಗೆ ಇನ್ನು ಮುಂದೆ ಒಟ್ಟು 1120 ರೂ.ನೀಡಬೇಕಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News