ಬಂಟ್ವಾಳ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Update: 2020-02-25 17:07 GMT

ಬಂಟ್ವಾಳ, ಫೆ.25: ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಅಜೆಕಲ ಎಂಬಲ್ಲಿ ನಡೆದಿದೆ.

ಕನಪಾದೆ ನಿವಾಸಿ ಕೊರಗಪ್ಪ (65) ಮೃತಪಟ್ಟವರು.

ಮರ ಹತ್ತಿ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಕೊರಗಪ್ಪ ರನ್ನು ಆಸ್ಪತ್ರೆಗೆ ಸಾಗಿಸಲಾದರೂ ದಾರಿ ಮಧ್ಯೆ ಮೃತಪಟ್ಟರು ಎಂದು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News