ಪಾಕ್ ಪರ ಘೋಷಣೆ ಕೂಗಿದ ಆರೋಪ: ವಕಾಲತ್ತು ವಹಿಸಲು ಅಡ್ಡಿಪಡಿಸುತ್ತಿದ್ದಾರೆ- ಹೈಕೋರ್ಟ್‌ಗೆ ಹೇಳಿಕೆ

Update: 2020-02-25 17:10 GMT

ಬೆಂಗಳೂರು, ಫೆ.25: ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ ಆರೋಪದಲ್ಲಿ ಬಂಧಿತರಾಗಿರುವ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಲು ಅಡ್ಡಿಪಡಿಸುತ್ತಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್‌ಗೆ ಹೇಳಿದ ಹಿನ್ನೆಲೆಯಲ್ಲಿ ಬುಧವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ. 

ಸಂವಿಧಾನದ ವಿಧಿ 21 ಮತ್ತು 22ರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿರುವ ಹುಬ್ಬಳ್ಳಿ ವಕೀಲರ ಸಂಘದ ನಿರ್ಣಯವನ್ನು ರದ್ದುಗೊಳಿಸಲು ಕೋರಿ ವಕೀಲ ಬಿ.ಟಿ.ವೆಂಕಟೇಶ್ ಸೇರಿ 24 ವಕೀಲರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆದಿತ್ತು. ನ್ಯಾಯಪೀಠವು ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸುವ ವಕೀಲರಿಗೆ ರಕ್ಷಣೆ ನೀಡಲು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿತ್ತು.

ಇಂದು(ಮಂಗಳವಾರ) ಅರ್ಜಿದಾರರ ಪರ ವಕೀಲರು ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಲು ಅಡ್ಡಿ ಪಡಿಸುತ್ತಿದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ನ್ಯಾಯಪೀಠವು ಬುಧವಾರ ವಿಚಾರಣೆ ನಡೆಸುವುದಾಗಿ ತಿಳಿಸಿತು. ಸೋಮವಾರ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಲು ಹೋದಾಗ ಕೆಲ ವಕೀಲರಿಂದ ವಿರೋಧ ವ್ಯಕ್ತವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News