2015ರ ಕೆಪಿಎಸ್ಸಿ ಹುದ್ದೆಗಳ ನೇಮಕಾತಿ ಪರೀಕ್ಷೆ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2020-02-25 17:34 GMT

ಬೆಂಗಳೂರು, ಫೆ.25: ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್ಸಿ) ಮುಖಾಂತರ 2015ರಲ್ಲಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಸಂತ್ರಸ್ತ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ನ್ಯಾಯಪೀಠವು ಕೆಪಿಎಸ್ಸಿ ಮತ್ತು ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News