ದಿಲ್ಲಿ ಹಿಂಸಾಚಾರ: ಮೃತರ ಸಂಖ್ಯೆ 20ಕ್ಕೆ ಏರಿಕೆ

Update: 2020-02-26 10:39 GMT

ಹೊಸದಿಲ್ಲಿ, ಫೆ.26: ದಿಲ್ಲಿಯಲ್ಲಿ ಹಿಂಸಾಚಾರದಿಂದಾಗಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸೈನ್ಯವನ್ನು ನಿಯೋಜಿಸುವಂತೆ  ದಿಲ್ಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

 “ಪರಿಸ್ಥಿತಿ ಆತಂಕಕಾರಿ. ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಆತ್ಮವಿಶ್ವಾಸವನ್ನು ತುಂಬಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ ”ಎಂದು ಕೇಜ್ರಿವಾಲ್ ಹೇಳಿದ್ದಾರೆ

 "ಸೈನ್ಯವನ್ನು ಕರೆಸಿಕೊಳ್ಳಬೇಕು ಮತ್ತು ಉಳಿದ ಪೀಡಿತ ಪ್ರದೇಶಗಳಲ್ಲಿ ತಕ್ಷಣ ಕರ್ಫ್ಯೂ ವಿಧಿಸಬೇಕು. ಈ ನಿಟ್ಟಿನಲ್ಲಿ ನಾನು ಗೃಹ ಸಚಿವರಿಗೆ ಪತ್ರ ಬರೆಯುತ್ತಿದ್ದೇನೆ. ” ಎಂದು ತಿಳಿಸಿದ್ದಾರೆ.

ಬಿಜೆಪಿ ಶಾಸಕ ಅಭಯ್ ವರ್ಮಾ ಅವರು ಲಕ್ಷ್ಮಿ ನಗರದ ಮಂಗಲ್ ಬಜಾರ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಮೆರವಣಿಗೆಯನ್ನು ಮುನ್ನಡೆಸಿರುವ ವೀಡಿಯೊ ವೈರಲ್ ಆಗಿದೆ.

ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್ ಅವರು ದೇಶದ  ರಾಜಧಾನಿಯಲ್ಲಿ ಶಾಂತಿ  ಕಾಪಾಡುವ ನಿಟ್ಟಿನಲ್ಲಿ  ಕೇಂದ್ರದ ಉದ್ದೇಶಗಳನ್ನು ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News