ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಆಟೊ ಚಾಲಕನ ಕೊಲೆ

Update: 2020-02-26 15:09 GMT

ಬೆಂಗಳೂರು, ಫೆ.26: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಆಟೊ ಚಾಲಕನನ್ನು ಕೊಲೆಗೈದಿರುವ ಘಟನೆ ಇಲ್ಲಿನ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಾಂಪುರ ನಿವಾಸಿ ವಿನೋದ್(32) ಕೊಲೆಯಾದ ಆಟೊ ಚಾಲಕ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ ಮನೆಯಿಂದ ಆಟೊದಲ್ಲಿ ಹೊರಟ್ಟಿದ್ದ ವಿನೋದ್‌ನನ್ನು ಶಾಂಪುರ ಗೇಟ್ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಈ ಘಟನೆ ನಡೆದಿರ ಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಡಾ.ಎಸ್.ಟಿ.ಶರಣಪ್ಪ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News