ದೆಹಲಿ ಹಿಂಸಾಚಾರ ಖಂಡಿಸಿ ಮಂಗಳೂರಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ

Update: 2020-02-26 17:02 GMT

ಮಂಗಳೂರು, ಫೆ.26: ದೆಹಲಿ ಹಿಂಸಾಚಾರ ಖಂಡಿಸಿ ಖಂಡಿಸಿ ಸೋಶಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನ ಸಭಾ ಸಮಿತಿಯ ವತಿಯಿಂದ ಮಂಗಳೂರು ತಾಲೂಕು ಕಚೇರಿಯ ಮುಂದೆ ಬುಧವಾರ ಪ್ರತಿಭಟನೆ ನಡೆಯಿತು.

ಎಸ್‌ಡಿಪಿಐ ದ.ಕ. ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮಾತನಾಡಿ ಜಫ್ರಬಾದ್‌ನಲ್ಲಿ ಶಾಂತಿಯುತವಾಗಿ ಸಿಎಎ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸಂಘಪರಿವಾರದ ಶಕ್ತಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿ ಗಲಭೆಗೆ ಕುಮ್ಮಕ್ಕು ನೀಡಿರುವುದು ಖಂಡನೀಯ. ಗಲಭೆಯಲ್ಲಿ ಈವರೆಗೆ 18 ಮಂದಿಯನ್ನು ಹತ್ಯೆಗೈಯಲಾಗಿದೆ. ನೂರಕ್ಕೂ ಅಧಿಕ ಮಂದಿ ಗಾಯಳುಗಳಾಗಿ ಜೀವನ್ಮನರಣ ಹೋರಾಟದಲ್ಲಿ ಆಸ್ಪತ್ರೆಯಲ್ಲಿದ್ದಾರೆ. ಮಾಧ್ಯಮಗಳು ಇದರ ಬಗ್ಗೆ ಚಕಾರವೆತ್ತದೆ ಇರುವುದು ದ್ವಿಮುಖ ನೀತಿಯನ್ನು ತೋರ್ಪಡಿಸುತ್ತದೆ ಎಂದರಲ್ಲದೆ, ದೆಹಲಿಯ ಹಿಂಸಾಚಾರವನ್ನು ನಿಯಂತ್ರಿಸಲು ವಿಫಲರಾದ ಗೃಹ ಸಚಿವ ಅಮಿತ್ ಶಾ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಆಲ್ಇಂಡಿಯಾ ಇಮಾಮ್ ಕೌನ್ಸಿಲ್ ನ ನಾಯಕ ಜಾಫರ್ ಫೈಝಿ, ಕಾರ್ಪೊರೇಟರ್ ಮುನೀಬ್ ಬೆಂಗರೆ ಮಾತನಾಡಿದರು.

ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ, ಜಿಲ್ಲಾ ಸಮಿತಿ ಸದಸ್ಯ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ,ಮಂಗಳೂರು ದಕ್ಷಿಣ ಕ್ಷೇತ್ರದ ಉಪಾಧ್ಯಕ್ಷ ಸಿದ್ದೀಕ್ ಬೆಂಗರೆ, ಮುಝೈರ್ ಕುದ್ರೋಳಿ ಮತ್ತಿತರು ಉಪಸ್ಥಿತರಿದ್ದರು.

ಎಸ್‌ಡಿಪಿಐ ಮಂಗಳೂರು ದಕ್ಷಿಣ ಕ್ಷೇತ್ರದ ಕಾರ್ಯದರ್ಶಿ ಅಕ್ಬರ್ ಕುದ್ರೋಳಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News