ಕಪಿಲ್‌ಮಿಶ್ರಾ, ಅನುರಾಗ್ ಠಾಕೂರ್ ವಿರುದ್ಧ ಎಫ್‌ಐಆರ್‌ಗೆ ದಿಲ್ಲಿ ಹೈಕೋರ್ಟ್ ಆದೇಶ

Update: 2020-02-27 05:56 GMT

ಹೊಸದಿಲ್ಲಿ,ಫೆ.26: ಮಹತ್ವದ ಬೆಳವಣಿಗೆಯೊಂದರಲ್ಲಿ ದಿಲ್ಲಿ ಹೈಕೋೀರ್ಟ್ ಬುಧವಾರ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್, ಪರ್ವೇಶ್ ವರ್ಮಾ, ಕಪಿಲ್ ಮಿಶ್ರಾ ಹಾಗೂ ಅಭಯ್‌ ವರ್ಮಾ ಸೇರಿದಂತೆ ಪ್ರಚೋದನಕಾರಿ ಭಾಷಣ ಮಾಡುವ ಎಲ್ಲಾ ರಾಜಕಾರಣಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ತಿಳಿಸಿದೆ.

ದಿಲ್ಲಿ ಪೊಲೀಸರ ಪರವಾಗಿ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ವರ್ಮಾ ಅವರ ಪ್ರಬಲ ವಿರೋಧದ ಹೊರತಾಗಿಯೂ ನ್ಯಾಯಮೂರ್ತಿಗಳಾದ ಎಸ್.ಮುರಳೀಧರ್ ಹಾಗೂ ತಲ್ವಂತ್‌ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶವನ್ನು ಹೊರಡಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಗರ ಪ್ರತಿಭಟನೆಯಲ್ಲಿ ಕಪಿಲ್ ಮಿಶ್ರಾ ಪ್ರಚೋದನಾಕಾರಿ ಭಾಷಣದ ಬಳಿ ಈಶಾನ್ಯ ದಿಲ್ಲಿಯಲ್ಲಿ ವ್ಯಾಪಕ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಅದು ಈ ಆದೇಶ ನೀಡಿದೆ.

  ದ್ವೇಷ ಭಾಷಣಗಳನ್ನು ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಿಸದಿರುವ ಕುರಿತು ನ್ಯಾಯಾಲಯದ ಆಕ್ರೋಶವನ್ನು ದಿಲ್ಲಿ ಪೊಲೀಸ್ ಆಯುಕ್ತರಿಗೆ ತಿಳಿಸುವಂತೆಯೂ ನ್ಯಾಯಪೀಠವು ಆದೇಶದಲ್ಲಿ ತಿಳಿಸಿದೆ ಮತ್ತು ನಾಳೆ ಈ ವಿಷಯವನ್ನು ಕೈಗೆತ್ತಿಕೊಳ್ಳುವುದಾಗಿ ಅದು ತಿಳಿಸಿತು.

  ದಿಲ್ಲಿ ಗಲಭೆಯಲ್ಲಿ ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ತನಿಖೆಗೆ ಕೋರಿ ಸಾಮಾಜಿಕ ಕಾರ್ಯಕರ್ತ ಹರ್ಷ ಮಂಧೇರ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ದಿಲ್ಲಿ ಹೈಕೋರ್ಟ್ ಈ ಆದೇಶ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News