ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

Update: 2020-02-26 16:28 GMT

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬುಧವಾರ ಬಂಧಿಸಿದ್ದಾರೆ. 

ಪುತ್ತೂರು ತಾಲೂಕಿನ ಮುಂಡೂರು ನಿವಾಸಿ ಮಹಮ್ಮದ್ ಇಲ್ಯಾಸ್(26) ಬಂಧಿತ ಆರೋಪಿ. ಆರೋಪಿಯ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರು ಬಂದ ಹಿನ್ನಲೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಶಾಮಿಯಾನ, ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿರುವ ಮಹಮ್ಮದ್ ಇಲ್ಯಾಸ್ ನನ್ನು ಬಂಧಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News