ನಾಡೋಜ ಡಾ.ಪಾಟೀಲ ಪುಟ್ಟಪ್ಪ ಆರೋಗ್ಯ ಸ್ಥಿರ: ಜಿಲ್ಲಾಧಿಕಾರಿ ದೀಪಾ ಚೋಳನ್

Update: 2020-02-26 16:51 GMT

ಹುಬ್ಬಳ್ಳಿ, ಫೆ.26: ಕಳೆದ ಎರಡು ವಾರಗಳಿಂದ ಅನಾರೋಗ್ಯ ನಿಮಿತ್ತ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರನ್ನು ಹುಬ್ಬಳ್ಳಿ ಜಿಲ್ಲಾಧಿಕಾರಿ ದೀಪಾ ಚೋಳನ್ ಇಂದು ಭೇಟಿಯಾಗಿ ಆರೋಗ್ಯ ಕ್ಷೇಮ ವಿಚಾರಿಸಿದರು. 

ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಕಡಿಮೆ ರಕ್ತದ ಒತ್ತಡ, ಕಿಡ್ನಿ, ಶ್ವಾಸಕೋಶದ ತೊಂದರೆ ಹಾಗೂ ರಕ್ತ ಹೀನತೆಯಿಂದ ಬಳಲುತ್ತಿದ ಪಾಟೀಲ ಪುಟ್ಟಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಸದ್ಯ ಆರೋಗ್ಯ ಸ್ಥಿರವಾಗಿದ್ದು ಸೂಕ್ತ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

'ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ. ಪಾಪು ಅವರ ಆರೋಗ್ಯ ದಿನದಿಂದ ದಿನಕ್ಕೆ ಸುಧಾರಿಸಿದೆ. ಇಂದು ನರರೋಗ ತಜ್ಞರು ಸಣ್ಣ ಶಸ್ತ್ರ ಚಿಕಿತ್ಸೆ ನಡೆಲಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂತರಟಾನಿ ಹೇಳಿದರು.

ಈ ಸಂದರ್ಭದಲ್ಲಿ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬಿ.ಆರ್.ಟಿ.ಎಸ್ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಜಿ.ಪಂ.ಸಿ.ಇ.ಒ. ಡಾ.ಬಿ.ಸಿ.ಸತೀಶ್, ಹುಬ್ಬಳ್ಳಿ ನಗರ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಗ್ರಾಮೀಣ ತಹಶಿಲ್ದಾರ್ ಪ್ರಕಾಶ್ ನಾಸಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News