ಪರಿಷ್ಕೃತ ಆಟೋರಿಕ್ಷಾ ದರ ಎ.1ರಿಂದ ಪಡೆಯಲು ಸೂಚನೆ; ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ

Update: 2020-02-26 16:58 GMT

ಉಡುಪಿ, ಫೆ.26: ಫೆ.6ರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಆಟೋರಿಕ್ಷಾಗಳಿಗೆ ಎ.1ರಿಂದ 1.5 ಕಿ.ಮೀಟರ್‌ವರೆಗೆ ಕನಿಷ್ಟ ದರ ರೂ.30ರೂ., ನಂತರದ ಪ್ರತಿ ಕಿ.ಮೀಟರ್‌ಗೆ ರೂ.17ರಂತೆ ದರ ಪರಿಷ್ಕರಿಸಿ ಪ್ರಯಾಣಕ್ಕೆ ತಕ್ಕಂತೆ ಪರಿಷ್ಕೃತ ಮೀಟರ್ ದರವನ್ನು ಪ್ರಯಾಣಿಕರಿಂದ ಪಡೆಯುವಂತೆ ಆದೇಶ ಹೊರಡಿಸಲಾಗಿತ್ತು.

ಆದರೆ ಜಿಲ್ಲೆಯ ಕೆಲವು ಆಟೋ ಚಾಲಕರು ಈಗಿನಿಂದಲೇ ಹೊಸ ದರ ಪಡೆಯುತ್ತಿರುವುದಾಗಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಪ್ರಾಧಿಕಾರಕ್ಕೆ ಬರುತ್ತಿವೆ. ಆದುದರಿಂದ ಉಡುಪಿ ಜಿಲ್ಲೆಯ ಎಲ್ಲಾ ಆಟೋರಿಕ್ಷಾ ಚಾಲಕ/ ಮಾಲಕರು ಎ.1ರವರೆಗೆ ಕಡ್ಡಾಯವಾಗಿ ಈ ಹಿಂದೆ ನಿಗದಿ ಪಡಿಸಿದ ದರವನ್ನು ಪ್ರಯಾಣಿಕರಿಂದ ಪಡೆಯುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ಅಂತಹ ಚಾಲಕ/ ಮಾಲಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿದ ಕಾಯದರ್ಶಿ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News