ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ; ನಿಷೇಧಾಜ್ಞೆ ಜಾರಿ

Update: 2020-02-26 17:29 GMT

ಉಡುಪಿ, ಫೆ.26: ಈ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 4ರಿಂದ 23ರವರೆಗೆ ನಡೆಯಲಿದ್ದು, ವಾರ್ಷಿಕ ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿ ಪಡಿಸಿದ ಎಲ್ಲಾ 27 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News