ಸಿಎಎ ವಿರೋಧಿಸಿ ಪ್ರತಿಭಟನೆಗೆ ನಿರಾಕರಣೆ: ಆಕ್ಷೇಪಣೆ ಸಲ್ಲಿಸಲು ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ

Update: 2020-02-26 17:46 GMT

ಬೆಂಗಳೂರು, ಫೆ.26: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೊಂಬೇಗೌಡ ನಗರದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಬಿಬಿಎಂಪಿ ಹಾಗೂ ನಗರ ಪೊಲೀಸ್ ಇಲಾಖೆಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿದೆ.

ಈ ಕುರಿತು ಬಿಡುಗಡೆಯ ಚಿರತೆಗಳು ಕರ್ನಾಟಕ ಸಂಘಟನೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಸ್.ಸುನೀಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು.

ಸಂಘಟನೆಯ ಪದಾಧಿಕಾರಿಗಳು ಹೊಂಬೇಗೌಡ ನಗರ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಪಾಲಿಕೆಯಿಂದ ಅನುಮತಿ ಪಡೆದಿದ್ದರೂ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಸಲಿದ ನ್ಯಾಯಪೀಠವು ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News