ದೆಹಲಿ ಹಿಂಸಾಚಾರ: ಎಸ್ ವೈ ಎಸ್ ರಾಜ್ಯ ಸಮಿತಿ ಖಂಡನೆ

Update: 2020-02-26 18:01 GMT

ಮಂಗಳೂರು: ದೆಹಲಿ ಹಿಂಶಾಚಾರವನ್ನು ಎಸ್ ವೈ ಎಸ್ ರಾಜ್ಯ ಸಮಿತಿ ಖಂಡಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಎರಡು ಮೂರು ದಿನಗಳಲ್ಲಿ ಅಮಾಯಕರನ್ನು ಕೊಲೆ,ದೌರ್ಜನ್ಯ, ನಡೆಸುತ್ತಾ ಮಸೀದಿ, ಮನೆ,ವ್ಯಾಪಾರ ಕೇಂದ್ರಗಳನ್ನು ಬೆಂಕಿಗಾಹುತಿ ಗೊಳಿಸಿ ಯುದ್ಧ ಭೂಮಿಯನ್ನಾಗಿ ಪರಿವರ್ತಿಸುತ್ತಿರುವ ಸಮಾಜ ಘಾತುಕ ಕೋಮುವಾದಿ ಫ್ಯಾಸಿಸ್ಟ್ ಶಕ್ತಿಗಳನ್ನು ಹದ್ದು ಬಸ್ತಿನಲ್ಲಿಡಲು ಸರಕಾರ ಮುಂದಾಗ ಬೇಕೆಂದು ಎಸ್ ವೈ ಎಸ್  ಆಗ್ರಹಿಸಿದೆ

ಹಿಂಸಾಚಾರವನ್ನು ಹತ್ತಿಕ್ಕಬೇಕಾದವರ ನಿಷ್ಕ್ರಿಯತೆ, ಸಾರ್ವಜನಿಕ ಸೇವೆಯಲ್ಲಿ ಗುರುತಿಸಬೇಕಾದವರು ಹಿಂಸೆಗೆ ಆಹ್ವಾನ ನೀಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಎಸ್ ವೈ ಎಸ್ ಅಭಿಪ್ರಾಯಪಟ್ಟಿದೆ.

ದೆಹಲಿ ಹೈಕೋರ್ಟ್ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಅವಲೋಕಿಸಲು ಮಧ್ಯರಾತ್ರಿ ವಿಚಾರಣೆ ನಡೆಸಿದ್ದು, ರಾಷ್ಟ್ರ ಪ್ರೇಮಿಗಳಲ್ಲಿ ಆಶಾಭಾವನೆಯನ್ನು ಮೂಡಿಸಿದೆ ಎಂದು ಎಸ್ ವೈ ಎಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಸಭೆಯಲ್ಲಿ ಎಸ್ ವೈ ಎಸ್ ರಾಜ್ಯಾಧ್ಯಕ್ಷ ಪಿ ಎಂ ಉಸ್ಮಾನ್ ಸಅದಿ ಪಟ್ಟೋರಿ, ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಎಮ್ ಝೈನಿ ಕಾಮಿಲ್, ಕೋಶಾಧಿಕಾರಿ ಅಬ್ದುಲ್ ಹಕೀಂ ಕೊಡ್ಲಿಪೇಟೆ, ಮಾಧ್ಯಮ ಕಾರ್ಯದರ್ಶಿ ಹಫೀಳ್ ಸಅದಿ ಕೊಡಗು ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News