ಪಿಎಸ್‌ಎ ಅಡಿಯಲ್ಲಿ ಮೆಹಬೂಬಾ ಮುಫ್ತಿಗೆ ಗೃಹಬಂಧನ: ಜಮ್ಮುಕಾಶ್ಮೀರ ಆಡಳಿತಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

Update: 2020-02-26 18:39 GMT

ಹೊಸದಿಲ್ಲಿ, ಫೆ. 25: ಜಮ್ಮು ಹಾಗೂ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿಯಲ್ಲಿ ಗೃಹಬಂಧನದಲ್ಲಿ ಇರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಮನವಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಮ್ಮು ಕಾಶ್ಮೀರ ಆಡಳಿತಕ್ಕೆ ಸೂಚಿಸಿದೆ.

ಮೆಹಬೂಬಾ ಮುಫ್ತಿ ಅವರ ಗೃಹಬಂಧನ ಪ್ರಶ್ನಿಸಿ ಉಚ್ಚ ನ್ಯಾಯಾಲಯ ಸಹಿತ ಇತರ ನ್ಯಾಯಾಂಗ ಸಮಿತಿ ಮುಂದೆ ಯಾವುದಾದರೂ ಮನವಿ ಸಲ್ಲಿಸಲಾಗಿದೆಯೇ ಎಂಬ ಬಗ್ಗೆ ವಿವರ ನೀಡುವಂತೆ ಮೆಹಬೂಬಾ ಮುಪ್ತಿ ಪುತ್ರಿ ಇಲ್ತಿಜಾ ಮುಫ್ತಿಗೆ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠ ನಿರ್ದೇಶಿಸಿತು. ಗೃಹಬಂಧನದಲ್ಲಿರುವ ಮೆಹಬೂಬಾ ಮುಫ್ತಿ ವಿರುದ್ಧ ಸಾರ್ವಜನಿಕ ಸುರಕ್ಷಾ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ಸರಕಾರ ಪೆಬ್ರವರಿ 5ರಂದು ನೀಡಿದ ಆದೇಶ ಪ್ರಶ್ನಿಸಿ ಇಲ್ತಿಜಾ ಮುಫ್ತಿ ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಈಗ ಪೀಠ ಪ್ರಕರಣದ ವಿಚಾರಣೆಯನ್ನು ಮಾರ್ಚ್ 19ಕ್ಕೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News