ಖಾಝಿ ಹತ್ಯೆ ಯತ್ನ ಪ್ರಕರಣವನ್ನು ಸರಕಾರ ಸಹಿಸುವುದಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Update: 2020-02-27 12:48 GMT

ಬೆಂಗಳೂರು, ಫೆ. 27: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಪರ ಮಾತನಾಡಿದ್ದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ಹತ್ಯೆ ಯತ್ನ ಪ್ರಕರಣವನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದಿಲ್ಲಿ ಎಚ್ಚರಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ರಾಷ್ಟ್ರೀಯತೆ ಬಗ್ಗೆ ಮಾತನಾಡಿದರೆ ಕೊಲೆಯತ್ನ ಅಕ್ಷಮ್ಯ. ಇಂತಹ ಘಟನೆಗಳನ್ನು ಸಹಿಸುವುದಿಲ್ಲ ಎಂಬುದನ್ನು ಕ್ರಮ ಕೈಗೊಳ್ಳುವ ಮೂಲಕ ಸರಕಾರ ಸಾಬೀತುಪಡಿಸಲಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರ ವಿರೋಧಿ ದುಷ್ಕರ್ಮಿಗಳ ಕೃತ್ಯಕ್ಕೆ ಸರಕಾರ ಕಠಿಣ ಕ್ರಮ ಕೈಗೊಳ್ಳುವ ಮೂಲಕ ನಮ್ಮ ಸರಕಾರ ಅಕ್ರಮ ಕೃತ್ಯದಲ್ಲಿ ಪಾಲ್ಗೊಳ್ಳುವವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಇದೇ ವೇಳೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News